ದೇವರಾಜ ಅರಸು ಅವರ ಜನ್ಮ ದಿನಾಚರಣೆ; ಅರಸು ಅವರ ಕಾರಿನಲ್ಲೇ ವಿಧಾನಸೌಧದ ಸಭಾಂಗಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಳಿಕ ಅರಸು ಅವರ ಕಾರಿನಲ್ಲೇ ಪ್ರಯಾಣಿಸಿ ವಿಧಾನಸೌಧದ ಸಭಾಂಗಣಕ್ಕೆ ಆಗಮಿಸಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಎಲ್ಲರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಪಿಎಆರ್ ಕಾರ್ಯದರ್ಶಿ ಶ್ರೀಕರ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story