ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ: ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ 2 ತಂಡಗಳ ರಚನೆ
ಬೆಂಗಳೂರು: ರಾಜ್ಯದಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಹಾಗೂ ಯುವ ಬ್ರಿಗೇಡ್ ಕಾರ್ಯಕರ್ತ ಮೈಸೂರಿನ ವೇಣುಗೋಪಾಲ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲನೆಗಾಗಿ ಬಿಜೆಪಿ ಎರಡು ತಂಡಗಳನ್ನು ರಚನೆ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈ ತಂಡಗಳನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಒಂದು ತಂಡ ನಾಳೆ ಬೆಳಗಾವಿಗೆ ಹಾಗೂ ಇನ್ನೊಂದು ತಂಡ ಮೈಸೂರಿಗೆ ತೆರಳಿ ಪ್ರಕರಣದ ಕುರಿತು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಲಿವೆ.
ಜೈನಮುನಿ ಕಾಮಕುಮಾರ ಸ್ವಾಮೀಜಿ ಹತ್ಯೆ ಸಂಬಂಧ ಸತ್ಯಾಸತ್ಯತೆ ಪರಿಶೀಲನಾ ತಂಡದ ನೇತೃತ್ವವನ್ನು ನಳಿನ್ ಕುಮಾರ್ ಕಟೀಲ್ ಹಾಗೂ ಮೈಸೂರಿನ ವೇಣುಗೋಪಾಲ್ ಹತ್ಯೆಯ ಸತ್ಯಾಸತ್ಯತೆ ಪರಿಶೀಲನಾ ತಂಡದ ನೇತೃತ್ವವನ್ನು ಸಿ.ಟಿ.ರವಿ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story