Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯು ಸಮಾಜದಲ್ಲಿರುವ ಅಸಮಾನತೆಯ...

ಬಿಜೆಪಿಯು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು : ಸಿಎಂ ಸಿದ್ದರಾಮಯ್ಯ

"ನಮ್ಮ ಸರಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ"

ವಾರ್ತಾಭಾರತಿವಾರ್ತಾಭಾರತಿ11 March 2024 3:09 PM IST
share
ಬಿಜೆಪಿಯು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು : ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ: "ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ವೋಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ನಾವು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು‌ . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು ಎನ್ನುತ್ತಾ, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಕೈ ಮುಗಿದು ಕೇಳಿದರು.

ಆದರೆ ಮೋದಿಯವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಣ ಹಾಕ್ತೀವಿ ಅಂದರು. ಮೋದಿಯವರು ಈ ಹಣ ಹಾಕಿದ್ರಾ ನಿಮ್ಮ ಖಾತೆಗೆ? ವಿದೇಶದಿಂದ ಕಪ್ಪು ಹಣ ತಂದರಾ ಎಂದು ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ʼಅಚ್ಚೆದಿನ್ ಆಯೆಗಾʼ ಎಂದು ಡೈಲಾಗ್ ಹೊಡೆದದ್ದು ಮೋದಿಯವರು. ಆದರೆ ಪೆಟ್ರೋಲ್, ಡೀಸೆಲ್ ಬೆಲೆ, ಗ್ಯಾಸ್ ಬೆಲೆ, ರಸಗೊಬ್ಬರದ ಬೆಲೆ ಎಲ್ಲಾ ಏರಿಸಿ ಏರಿಸಿ ಬಡವರ, ಮಧ್ಯಮ ವರ್ಗದವರು ಬದುಕುವುದೇ ದುಸ್ತರ ಮಾಡಿಬಿಟ್ಟರು ಎಂದು ಹೇಳಿದರು.

ಅಸಮಾನತೆಯ ಮಹಾನ್ ಪೋಷಕರು

"ಬಿಜೆಪಿ ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿಯ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ಕಾಂಗ್ರೆಸ್ ಸರಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಅವಮಾನಿಸುತ್ತಾರೆ " ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ

"ನಮ್ಮ ಸರಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸಿ ಅವರ ಮನುಸ್ಮೃತಿ ಪರವಾಗಿ ಮಾತನಾಡುತ್ತಿದೆ " ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಅಜೆಂಡಾವನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು

ಬಿಜೆಪಿಯ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ ಹೆಗ್ಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ಇವರು ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಮಾತಾಡಿದರೂ ಪ್ರಧಾನಿ ಮೋದಿಯವರಾಗಲೀ, ಬಿಜೆಪಿ ಹೈ ಕಮಾಂಡ್ ಆಗಲಿ ಇದನ್ನು ವಿರೋಧಿಸಿಲ್ಲ. ಹೀಗಾಗಿ ಬಿಜೆಪಿಯ ಅಜೆಂಡಾವನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನ ಹೋದರೆ ನಾಡಿನ ಜನರ ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಎಂದು ಎಚ್ಚರಿಸಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹಿಡಿದ ಕೆಲಸ ಬಿಡುವವರಲ್ಲ. ದೇವನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಅವರು ದೇವನಹಳ್ಳಿ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೆಡಿ ಮಾಡಿಕೊಂಡು ಬಂದಿದ್ದಾರೆ. ಅದೆಲ್ಲಕ್ಕೂ ಹಣ ಬಿಡುಗಡೆ ಮಾಡಲಾಗುವುದು, ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಸೇರಿ ಪಕ್ಷದ ಶಾಸಕರು ಮತ್ತು ಇಲಾಖೆಗಳ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X