ಶಾಸಕ ಯತ್ನಾಳ್ ವಿರುದ್ಧ ಬಿಜೆಪಿ ಸಂಸದ ಸಂಗಣ್ಣ ಕರಡಿ ಆಕ್ರೋಶ
ಕೊಪ್ಪಳ, ಸೆ.2: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ʼʼಲೋಕಸಭಾ ಚುನಾವಣೆಗೆ ಸಾಕಷ್ಟು ಸಮಯವಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಂಟು ಜನ ಸಂಸದರಿಗೆ ಟಿಕೆಟ್ ಇಲ್ಲ ಎಂಬ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಅವರು ಈ ರೀತಿ ಸುಮ್ ಸುಮ್ನೆ ಹೇಳಿಕೆ ನೀಡುವುದು ಸರಿಯಲ್ಲʼʼ ಎಂದು ಆಕ್ರೋಶ ವ್ತಕ್ತಪಡಿಸಿದರು.
ʼಯತ್ನಾಳ ಅಥವಾ ಇನ್ಯಾರಾದರೂ ಆಗಲಿ ಪಕ್ಷದ ವಿರುದ್ಧ ಮಾತನಾಡಬಾರದು. ಯತ್ನಾಳ್ ಹೇಳಿರುವುದಕ್ಕೆ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು. ರೇಣುಕಾಚಾರ್ಯ ಬಿಜೆಪಿಯ ವಿರುದ್ದ ಯಾಕೆ ಹೇಳಿದರೂ ಗೊತ್ತಿಲ್ಲ, ಅವರನ್ನೇ ಕೇಳಬೇಕು. ಯಾರೇ ಆಗಲಿ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಈ ರೀತಿ ಮಾತನಾಡಬಾರದುʼʼ ಎಂದು ತಾಕೀತು ಮಾಡಿದರು.
Next Story