ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ರೂವಾರಿ ಯಾರೆಂದು ಬಿಜೆಪಿ ಉತ್ತರಿಸಬೇಕು: ಕಾಂಗ್ರೆಸ್
"ಆರಗ ಜ್ಞಾನೇಂದ್ರ ಅವರ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಏನು ನಡೆಯುತ್ತಿದೆ?"
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ ಅವರನ್ನು NIA ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಈಗ ಬಿಜೆಪಿ ರಾಜ್ಯದ ಜನರಿಗೆ ಉತ್ತರ ಹೇಳುವ ಸಮಯ ಬಂದಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, "ಹಿಂದೆ ಕುಕ್ಕರ್ ಬಾಂಬ್ ಬ್ಲಾಸ್ಟ್ ತರಬೇತಿ ತೀರ್ಥಹಳ್ಳಿಯಲ್ಲಿ ನಡೆದಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಈಗ ರಾಮೇಶ್ವರಂ ಕೆಫೆ ಸ್ಫೋಟದ ಪ್ರಕಾರಣದಲ್ಲೂ ತೀರ್ಥಹಳ್ಳಿ ತಳುಕು ಹಾಕಿಕೊಂಡಿದೆ. ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಏನು ನಡೆಯುತ್ತಿದೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮಾಜಿ ಗೃಹಸಚಿವರಿಗೆ ತಮ್ಮ ಕ್ಷೇತ್ರದಲ್ಲಿನ ಆಗುಹೋಗುಗಳ ಬಗ್ಗೆ ಗಮನವಿಲ್ಲವೇ? ಅಥವಾ ಇವರ ಗಮನದಲ್ಲೇ ಎಲ್ಲವೂ ನಡೆಯುತ್ತಿದೆಯೇ? ಬಿಜೆಪಿ ಉತ್ತರಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Next Story