ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಚೈತ್ರಾ ಸೇರಿ 9 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
ಆರೋಪಿಗಳು
ಬೆಂಗಳೂರು, ನ.8: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೂರ್ಣಗೊಳಿಸಿದ್ದು, ಈ ಸಂಬಂಧ ಚೈತ್ರಾ ಹಾಗೂ ಆಕೆಯ ಸಹಚರರ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಆಗಿರುವ ಚೈತ್ರಾ, ಗಗನ್, ಹಾಲಶ್ರೀ ಸ್ವಾಮೀಜಿ, ರಮೇಶ್, ಪ್ರಜ್ವಲ್, ಶ್ರೀಕಾಂತ್, ಪ್ರಸಾದ್ ಬೈಂದೂರು ಸೇರಿ 9 ಮಂದಿ ಆರೋಪಿಗಳ ವಿರುದ್ಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರು 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಚೈತ್ರಾ ಹಾಗೂ ಸಹಚರರ ವಿರುದ್ಧ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರು ದೂರು ನೀಡಿದ್ದರು.
ಈ ಸಂಬಂಧ ತನಿಖೆ ನಡೆಸಿದ ಸಿಸಿಬಿ ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಚೈತ್ರಾ, ಗಗನ್, ದೇವರಾಜ್, ರಮೇಶ್, ಹಾಗೂ ಶ್ರೀಕಾಂತ್ನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದರೆ. ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಒಡಿಶಾದಲ್ಲಿ ಬಂಧಿಸಿ ಕರೆತರಲಾಗಿತ್ತು. ತನಿಖೆಯಲ್ಲಿ ಉದ್ಯಮಿಯನ್ನು ಉದ್ದೇಶಪೂರ್ವಕ ಹಾಗೂ ವ್ಯವಸ್ಥಿತವಾಗಿ ಸಂಚು ರೂಪಿಸಿ ವಂಚಿಸಿರುವ ಸಾಕ್ಷಾ್ಯಧಾರಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.