Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯತ್ನಾಳ್ ವಿರುದ್ಧ ಯಾವುದೇ ಕ್ರಮ...

ಯತ್ನಾಳ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ಬಿಜೆಪಿ ದುರ್ಬಲವಾಗಿದೆ: ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ29 Dec 2023 7:05 PM IST
share
ಯತ್ನಾಳ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ಬಿಜೆಪಿ ದುರ್ಬಲವಾಗಿದೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ವಿರುದ್ಧವೆ ಭ್ರಷ್ಟಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೆಳಿದಾದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದರು.

ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ ಬಿಜೆಪಿ ಸರಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದು ಅವರು ಹೇಳಿದರು.

ಬಿಜೆಪಿ ಸರಕಾರವಿದ್ದಾಗ ಕೊರೋನ ಸಂದರ್ಭದಲ್ಲಿ ನಡೆದ ಖರೀದಿ ಮತ್ತಿತರ ವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಸರಕಾರ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸ ಮಾಡುತ್ತದೆ. ಯಾರಿಂದಲಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

ಅಂಗಡಿ ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ಕನ್ನಡ ನಾಮಫಲಕ ಬಳಸಬೇಕೆಂದು ಕರವೇ ಕಾರ್ಯಕರ್ತರು ಹೋರಾಟ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಯಮದ ಪ್ರಕಾರ ಕನ್ನಡ ಬಳಸಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ. ಆದರೆ, ಯಾರೂ ಏಕಾಏಕಿ ಕಾನೂನನ್ನು ತಮ್ಮ ಕೈಗೆ ಎತ್ತಿಕೊಳ್ಳಬಾರದು ಎಂದರು.

ಮೊದಲಿಗೆ, ಕನ್ನಡ ನಾಮಫಲಕಗಳನ್ನು ಹಾಕಲು ಒಂದು ಗಡುವು ನಿಗದಿಪಡಿಸುವ ನಿರ್ಧಾರ ಆಗಲಿ. ಅದಾದ ಮೇಲೆ ನಿಯಮ ಪಾಲಿಸದವರ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಉದ್ಯಮಗಳ ಸ್ಥಾಪನೆಗೆ ಭಾರತದ ರಾಜ್ಯಗಳೂ ಸೇರಿದಂತೆ ಜಗತ್ತಿನೆಲ್ಲೆಡೆ ಪೈಪೋಟಿ ಇದೆ. ಉದ್ಯಮಿಗಳಿಗೆ ಯಾವುದೇ ರಾಜ್ಯವೂ ಅನಿವಾರ್ಯವಲ್ಲ. ಇಂತಹ ಘಟನೆಗಳು ನಡೆದಾಗ ಅವು ಎಲ್ಲಾ ಕಡೆ ವೈರಲ್ ಆಗಿ ನಮ್ಮಲ್ಲಿ ಬಂಡವಾಳ ಹೂಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಕನ್ನಡಪರ ಹೋರಾಟಗಾರರು ಇದರ ಬಗ್ಗೆಯೂ ಗಮನಹರಿಸಬೇಕು ಎಂದು ಅವರು ಹೇಳಿದರು.

ನಮ್ಮ ಇಲಾಖೆಗೆ ಒಳಪಟ್ಟ ವ್ಯಾಪ್ತಿಯಲ್ಲಿ ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸಲಹಾಸೂಚಿ (ಅಡೈಸರಿ) ಹೊರಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಕಾಂಗ್ರೆಸ್ ಸರಕಾರದಲ್ಲಿ ಮೂವರು ಡಿಸಿಎಂ ಗಳನ್ನು ಮಾಡುವ ಸಾಧ್ಯತೆ ಬಗ್ಗೆ ಕೇಳಿದಾಗ, ಇದರ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ನಾಯಕರ ಮುಂದೆ ನಮ್ಮ ಅಭಿಪ್ರಾಯ ಹೇಳುತ್ತೇವೆ. ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಅಗತ್ಯವಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X