ʼಬಾಂಬ್ ಸ್ಫೋಟ ಪ್ರಕರಣʼ: ಕೆಫೆಯಲ್ಲಿ ಸ್ಥಳ ಮಹಜರು ನಡೆಸಿದ ಎನ್‍ಐಎ
ಬೆಂಗಳೂರು: ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ರಾಷ್ಟ್ರೀಯ ತನಿಖಾ ದಳದ(ಎನ್‍ಐಎ) ಎಸ್.ಪಿ ನೇತೃತ್ವದ ಮೂವರು ಅಧಿಕಾರಿಗಳ ತಂಡ ಮಂಗಳವಾರ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದು, ಸಿಬ್ಬಂದಿಯಿಂದ ಘಟನಾ ದಿನದ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
ಪ್ರಕರಣದ ತನಿಖೆಯನ್ನು ಸೋಮವಾರ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು.
ಈಗಾಗಲೇ ಪ್ರತ್ಯೇಕ ಎಫ್‍ಐಆರ್ ದಾಖಲಿಸಿಕೊಂಡಿರುವ ಎನ್‍ಐಎ ಅಧಿಕಾರಿಗಳು, ಘಟನಾ ಸ್ಥಳದಲ್ಲಿ ಸಿಸಿಟಿವಿ ದೃಶ್ಯ, ಸ್ಥಳದಲ್ಲಿದ್ದ ಸಾಕ್ಷ್ಯ ಸಂಗ್ರಹದ ಜತೆಗೆ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪತ್ತೆಯಾಗಿರುವ ಸುಧಾರಿತ ಸ್ಫೋಟಕ ಸಾಧನ (ಐಇಡಿ)ಕ್ಕೆ ಸಂಬಂಧಿಸಿದ ವಸ್ತುಗಳು, ಚೂರುಗಳನ್ನು ಪರಿಶೀಲಿಸಿ ತನಿಖಾ ಅಂಶವಾಗಿ ವಶಕ್ಕೆ ಪಡೆದುಕೊಂಡಿರುವುದಾಗಿ ಗೊತ್ತಾಗಿದೆ.
ಬಾಂಬ್ ಸ್ಪೋಟ ಪ್ರಕರಣವನ್ನು ಎನ್‍ಐಎ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿರುವುದಾಗಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Next Story