ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಎಲ್ಲೆಡೆ ಸೂಕ್ತ ಭದ್ರತೆಗೆ ಪೊಲೀಸರಿಗೆ ಸೂಚನೆ; ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿ.1: ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ,ಎಚ್ಚರಿಕೆಯಿಂದ ಇರಬೇಕು. ಬೆದರಿಕೆ ಕರೆ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪೋಷಕರು ಆತಂಕ ಪಡಬಾರದು. ಬೆದರಿಕೆ ಕರೆ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.
ಇಂದು ಬೆಳಗ್ಗೆ ಬೆಂಗಳೂರಿನ ಬಸವೇಶ್ವರ ನಗರ, ಸದಾಶಿವ ನಗರ ಹಾಗೂ ಯಲಹಂಕದಲ್ಲಿನ 15ಕ್ಕೂ ಅಧಿಕ ಖಾಸಗಿ ಶಾಲೆಗಳಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಕೆಲವು ಶಾಲೆಗಳಿಗೆ ರಜೆ ಕೂಡಾ ಸಾರಲಾಗಿದೆ.
Next Story