Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮವರ ಕುತಂತ್ರ, ಪಿತೂರಿಯಿಂದಲೇ...

ನಮ್ಮವರ ಕುತಂತ್ರ, ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತವನ್ನು ಆಳಿದರು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Jan 2024 3:35 PM IST
share
ನಮ್ಮವರ ಕುತಂತ್ರ, ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತವನ್ನು ಆಳಿದರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮವರ ಕುತಂತ್ರ, ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು. ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು.

ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X