ಪೋಕ್ಸೋ ಪ್ರಕರಣ | ಜಾಮೀನು ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್ಗೆ ಬಿ.ಎಸ್.ಯಡಿಯೂರಪ್ಪ ಅರ್ಜಿ

ಬಿ.ಎಸ್.ಯಡಿಯೂರಪ್ಪ
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಜಾಮೀನು ನೀಡಿದ ವೇಳೆ ವಿಧಿಸಿರುವ ಷರತ್ತು ಸಡಿಲಿಕೆ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕೋರ್ಟ್ ವ್ಯಾಪ್ತಿ ಬಿಟ್ಡು ತೆರಳದಂತೆ ಹೈಕೋರ್ಟ್ ಷರತ್ತು ಹಿನ್ನೆಲೆಯಲ್ಲಿ ಸಡಿಲಿಕೆ ಕೋರಿ ಹೈಕೋರ್ಟ್ಗೆ ಯಡಿಯೂರಪ್ಪ ಪರ ವಕೀಲರ ಅರ್ಜಿ ಸಲ್ಲಿದ್ದರು.
ಈ ವೇಳೆ ಬಿ.ಎಸ್.ಯಡಿಯೂರಪ್ಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಸರಕಾರದ ಪರ ವಕೀಲರು, ಬಿ.ಎಸ್.ಯಡಿಯೂರಪ್ಪ ಅವರು ಕೋರ್ಟ್ ಷರತ್ತು ಉಲ್ಲಂಘಿಸಿದ್ದಾರೆ. ಕೋರ್ಟ್ ಅನುಮತಿ ಪಡೆಯದೇ ವ್ಯಾಪ್ತಿ ಬಿಟ್ಟು ಪ್ರಯಾಣಿಸಿದ್ದಾರೆ ಎಂದು ಹೇಳಿದರು. ಈಗಾಗಲೇ ಪ್ರಕರಣ ಸಂಬಂಧ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ವಿಚಾರಣೆ ಮಾ.24 ಕ್ಕೆ ಮುಂದೂಡಿದೆ.
Next Story