ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ
ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಎಪ್ರಿಲ್ 12ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಎಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎಪ್ರಿಲ್ 20 ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎಪ್ರಿಲ್ 22ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ, ಮೇ 7ರಂದು ಮತದಾನ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಸುರಪುರ ಕ್ಷೇತ್ರದಲ್ಲಿ ಪುರುಷ-1,41,682, ಮಹಿಳೆ-1,39,729 ಹಾಗೂ ಇತರೆ 28 ಮಂದಿ ಸೇರಿದಂತೆ ಒಟ್ಟು 2,81,439 ಮಂದಿ ಮತದಾರರಿದ್ದು, 6,104 ಮಂದಿ 18-19 ವರ್ಷದ ಯುವ ಮತದಾರರಿದ್ದಾರೆ. ನಗರ ಪ್ರದೇಶದಲ್ಲಿ 80 ಹಾಗೂ ಗ್ರಾಮೀಣ ಪ್ರದೇಶದಲ್ಲಿ 237 ಸೇರಿ ಒಟ್ಟು 317 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಆಯೋಗ ಪ್ರಕಟಿಸಿದೆ.
Next Story