ಅವಧಿ ಮುಕ್ತಾಯಗೊಂಡ 207 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಜು.23ಕ್ಕೆ ಉಪಚುನಾವಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.3: ರಾಜ್ಯ ಚುನಾವಣಾ ಆಯೋಗವು 2023ರ ಆಗಸ್ಟ್ ಮಾಹೆಯವರೆಗೆ ಅವಧಿ ಮುಕ್ತಾಯವಾಗುವ 14 ಗ್ರಾಮ ಪಂಚಾಯಿತ್ ಗಳ 207 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಖಾಲಿ ಉಳಿದಿರುವ 174 ಗ್ರಾಮ ಪಂಚಾಯಿತಿಗಳ 223 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.
ಜು.6ಕ್ಕೆ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲು, ನಾಮಪತ್ರಗಳನ್ನು ಸಲ್ಲಿಸಲು ಜು.12ರಂದು ಕೊನೆಯ ದಿನವಾಗಿದೆ. ಇನ್ನು ಜು.13ರಂದು ನಾಮಪತ್ರಗಳನ್ನು ಪರಿಶೀಲಿಸಲು, ಜು.15ಕ್ಕೆ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಇನ್ನು ಮತದಾನಕ್ಕೆ ಅವಶ್ಯವಿದ್ದರೆ, ಮತದಾನವನ್ನು ನಡೆಸಲು ಜು.23ಕ್ಕೆ ಸೂಚಿಸಲಾಗಿದೆ. ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ಜು.25ಕ್ಕೆ ನಡೆಸಲು ಆಯೋಗ ತಿಳಿಸಿದೆ. ಜು.26ಕ್ಕೆ ಮತಗಳ ಎಣಿಕೆ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜು.6 ಹಾಗೂ ಜು.26ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ.