‘ರಾಮನಗರ ಜಿಲ್ಲೆಗೆ ಮರುನಾಮಕರಣ’ ಕುರಿತು ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
Photo:X/@DKShivakumar
ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ಸಂಬಂಧ ಜನಪ್ರತಿನಿಧಿಗಳ ನಿಯೋಗ ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಆಮೇಲೆ ನೋಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಮನಗರ ಜಿಲ್ಲೆ ಎಂದು ಕರೆಯೋದು ಬೇಡ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಮನವಿ ಮಾಡಿದ್ದಾರೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿ ಜನಗಣತಿ ವರದಿಯನ್ನು ನಾನು ಇನ್ನೂ ಪರಿಶೀಲಿಸಿಲ್ಲ. ಈ ವರದಿಗೆ ಸಂಬಂಧಿಸಿದಂತೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.
‘ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಂಸದ ಡಾ.ಕೆ.ಸುಧಾಕರ್ ಇದ್ದ ಸಭೆಯಲ್ಲೆ ಮದ್ಯ ಹಂಚಿಕೆ ಮಾಡಲಾಗಿದೆ. ಸಂಸ್ಕøತಿ, ಧರ್ಮ, ನೈತಿಕತೆ ಬಗ್ಗೆ ಮಾತನಾಡುವವರು ಈಗ ಹಗಲಲ್ಲೇ ಮದ್ಯ ಹಂಚಿದ್ದಾರೆ, ಇದು ನೈತಿಕತೆಯಾ?’
-ಸಿದ್ದರಾಮಯ್ಯ ಮುಖ್ಯಮಂತ್ರಿ