ಕಾರ್ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು: ʼʼಕಾರ್ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ. ಮೊದಲು ಅವರು ಸರ್ಕಾರದಿಂದ ಅನುಮತಿಯನ್ನು ಪಡೆದುಕೊಳ್ಳಲಿ. ಅವರು ಅನುಮತಿಯನ್ನು ತೆಗೆದುಕೊಳ್ಳದಿರುವಾಗ ನಿಷೇಧದ ಪ್ರಶ್ನೆ ಎಲ್ಲಿದೆ?ʼʼ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಪ್ರತಿಯೊಬ್ಬರೂ ಸರ್ಕಾರದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಬಿಳಿ ನಂಬರ್ ಪ್ಲೇಟ್ಗಳನ್ನು ಹೊಂದಿರುವ ವಾಣಿಜ್ಯೇತರ ಖಾಸಗಿ ವಾಹನಗಳನ್ನು ಕಾರ್ಪೂಲಿಂಗ್ ಉದ್ದೇಶಗಳಿಗಾಗಿ ಬಳಸುವುದು ಕಾನೂನುಬಾಹಿರವಾಗಿದೆʼʼ ಎಂದು ತಿಳಿಸಿದ್ದಾರೆ.
ʼʼಹಳದಿ ಬಣ್ಣದ ನಂಬರ್ ಪ್ಲೇಟ್ಗಳನ್ನು ಹೊಂದಿರುವ ವಾಣಿಜ್ಯ ವಾಹನಗಳನ್ನು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕಾರ್ಪೂಲಿಂಗ್ಗೆ ಬಳಸಬಹುದುʼʼ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story