ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ | ಸಂಪುಟ ಸಭೆಯಲ್ಲಿ ಯಾರೂ ವಿರೋಧ ಮಾಡಿಲ್ಲ: ಸಿಎಂ ಸಿದ್ಧರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು : ‘ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ(ಜಾತಿ ಗಣತಿ) ಯಾರೂ ವಿರೋಧ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಗಣತಿ ವರದಿಯ ಕುರಿತು ಸುದೀರ್ಘ ಚರ್ಚೆ ನಡೆಯಿತು. ಆದರೆ, ಚರ್ಚೆ ಅಪೂರ್ಣವಾಗಿದೆ. ಹಾಗಾಗಿ, ಅದನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ’ ಎಂದು ಸ್ಪಷ್ಟಣೆ ನೀಡಿದರು.
‘ಯಾರೂಬ್ಬರು ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಗೆ ವಿರೋಧ ಮಾಡಿಲ್ಲ. ಸಚಿವರು ಒಬ್ಬರಿಗೊಬ್ಬರು ಏರುಧ್ವನಿಯಲ್ಲಿ ಮಾತನಾಡಿದ್ದಾರೆ ಎಂಬುದು ಸುದ್ದಿ ಸುಳ್ಳು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಮಾಡಲಾಗುವುದು’ ಎಂದು ಸಿದ್ದರಾಮಯ್ಯ ಇದೇ ವೇಳೆ ವಿವರಣೆ ನೀಡಿದರು.
Next Story