ಕಾವೇರಿ ನೀರು ವಿಚಾರ: ತಮಿಳುನಾಡು ಗಡಿ ತಾಲೂಕು ಕೆಜಿಎಫ್ ನಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ
ನಗರದ ಹೊಸ ಬಸ್ ನಿಲ್ದಾಣದ ಸರ್ಕಲ್ ಮಧ್ಯದಲ್ಲಿ ಕುಳಿತು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಒಕ್ಕೂಟ ಆಯೋಜಿಸಿರುವ ಕರ್ನಾಟಕ ಬಂದ್ ಗೆ ಜಿಲ್ಲೆಯ ತಮಿಳುನಾಡು ಗಡಿ ತಾಲೂಕು ಕೆಜಿಎಫ್ ನಲ್ಲಿ ಜನ ಸ್ವಯಂ ಪ್ರೇರಿತರಾಗಿ ಬಂದ್ ಗೆ ಸಹಕರಿಸಿದ್ದಾರೆ.
ಶೇ.90 ರಷ್ಟು ತಮಿಳು ಭಾಷಿಗರಿರುವ ಕೆಜಿಎಫ್ ತಾಲ್ಲೂಕಿನಲ್ಲಿ ಕರ್ನಾಟಕದ ಕಾವೇರಿಗಾಗಿ ಜನ ಬಂದ್ ಗೆ ಸಹಕಾರ ನೀಡಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಗಳು ಬಸ್ ನಿಲ್ದಾಣಕ್ಕೆ ಬಂದಿದ್ದರೂ ಪ್ರಯಾಣಿಕರಿಲ್ಲದೆ ಖಾಲಿ ನಿಂತಿವೆ.
ಈ ಮಧ್ಯೆ ಕೋಲಾರ ಜಿಲ್ಲಾಧಿಕಾರಿ ಅವರು ಯಾವುದೇ ಸರ್ಕಾರಿ ಶಾಲಾ ಕಾಲೇಜು, ಕಛೇರಿಗಳಿಗೂ ರಜೆ ಇಲ್ಲ ಎಂದು ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Next Story