Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ...

ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕಾವೇರಿ ನೀರು ಪೂರೈಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Feb 2024 5:08 PM IST
share
ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕಾವೇರಿ ನೀರು ಪೂರೈಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು" ಎಂದು ತಿಳಿಸಿದರು.

"ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ. ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣ ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು.

ಬೆಂಗಳೂರು ವ್ಯಾಪ್ತಿಯ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ ಶಾಸಕರಾದ ಮುನಿರಾಜು ಮತ್ತು ಬೈರತಿ ಬಸವರಾಜು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೆ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್ ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿಗಳನ್ನು ಮತ್ತೆ ಕೊರೆಯಲು ಆದೇಶ ನೀಡಲಾಗಿದೆ” ಎಂದು ಹೇಳಿದರು.

“ಕೋವಿಡ್ ಕಾರಣದಿಂದ ಕಾವೇರಿ ನೀರು ಸರಬರಾಜು ಕಾಮಗಾರಿ ತಡವಾಗಿತ್ತು. ಅಲ್ಲಿಯವರೆಗೆ ರೀ- ಬೋರ್ವೆಲ್, ಪಂಪ್ ದುರಸ್ತಿ ಸೇರಿದಂತೆ ಇತರೆ ಕೆಲಸಗಳಿಗೆ ಟೆಂಡರ್ ಕರೆಯಲಾಗಿದೆ. ಕೂಡಲೇ ಮುಂದಿನ ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆ ವ್ಯಾಪ್ತಿಯಲ್ಲಿ 68 ಟ್ಯಾಂಕರ್ ಗಳು ಕಾರ್ಯನಿರ್ವಹಿಸುತ್ತಿವೆ” ಎಂದು ತಿಳಿಸಿದರು.

“ದಾಸರಹಳ್ಳಿಗೆ ಈಗಾಗಲೇ 5.24 ಲಕ್ಷ ಅನುದಾನವನ್ನು ನೀಡಲಾಗಿದೆ. ಲಕ್ಷ್ಮೀಪುರ ಸೇರಿದಂತೆ ದಾಸರಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕಾವೇರಿ ನೀರು ಪೂರೈಕೆ ಕಾಮಗಾರಿಯನ್ನು ನಡೆಸಲಾಗುವುದು. ದಾಸರಹಳ್ಳಿ ಕ್ಷೇತ್ರದಲ್ಲಿ ಕಾರ್ಖಾನೆಗಳು ಹೆಚ್ಚು ಇರುವ ಕಾರಣ ನೀರು ಹೆಚ್ಚು ಬಳಕೆಯಾಗುತ್ತಿದೆ. ಆದ ಕಾರಣ ವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತಿದೆ. ಬೋರ್ವೆಲ್ ನೀರು ಬಳಕೆಯ ಬಗ್ಗೆ ಈಗಾಗಲೇ ಕಾನೂನು ಇದ್ದು. ಈ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಕೆ.ಆರ್ ಪುರಂ ಕ್ಷೇತ್ರದಲ್ಲಿ ನಾರಾಯಣಪುರ ಸೇರಿದಂತೆ ಕೆಲವೆಡೆ ನೀರನ್ನು ತುಂಬುವ ಕೆಲಸ ಮಾಡಬೇಕಿದೆ ಟ್ಯಾಂಕರ್ ಗಳು ರೂ.1,500 ವಸೂಲಿ ಮಾಡುತ್ತಿದ್ದು ಇದನ್ನು ರೂ. 500ಕ್ಕೆ ಇಳಿಸಬೇಕು ಎಂದು ಬೈರತಿ ಬಸವರಾಜು ಅವರು ಮನವಿ ಮಾಡಿದ್ದು. ಖಾಸಗಿ ನೀರು ಟ್ಯಾಂಕರ್ ದರ ಇಳಿಸಲು ಕಾನೂನು ತರಬಹುದು. ಇಲ್ಲಿ ಎಲ್ಲರೂ ಒಮ್ಮತಕ್ಕೆ ಬಂದರೆ ಇದನ್ನು ಜಾರಿಗೆ ತರಲು ಸಿದ್ಧ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರಿಂದ ಒಂದು ಪತ್ರ ಬರೆಸಿ ಕೊಟ್ಟರೆ ಸಲಹೆಯನ್ನು ಪರಿಗಣಿಸುತ್ತೇವೆ” ಎಂದು ಹೇಳಿದರು.

“ಇದರ ಜೊತೆಗೆ ಅಂತರ್ಜಲ ನೀರಿನ ಅತಿ ಹೆಚ್ಚಿನ ಬಳಕೆ, ಶೋಷಣೆ ತಪ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ವಿಚಾರವಾಗಿ ಕಂದಾಯ ಇಲಾಖೆಯ ಬಳಿಯೂ ಚರ್ಚೆ ನಡೆಸಲಾಗುವುದು. ಬೆಂಗಳೂರಿಗೆ ಈಗ 1,450 ಎಂಎಲ್ಡಿ ನೀರು ಸರಬರಾಜು ಆಗುತ್ತಿದೆ. ಈ ವರ್ಷ ಬರಗಾಲ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಈ ವಿಚಾರವಾಗಿ ಮೊನ್ನೆ ಬಿಜೆಪಿ ಶಾಸಕರಾದ ಸೋಮಶೇಖರ್ ಹಾಗೂ ಮುನಿರತ್ನ ಅವರು ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ಇನ್ನೂ 500 ಅಡಿ ಹೆಚ್ಚು ಕೊರೆಯಲು ಅವಕಾಶ ನೀಡಬೇಕು ಎಂಬ ಸಲಹೆ ನೀಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X