Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಾಮರಾಜನಗರ: ಕೋರ್ಟ್ ಗೆ ಕರೆದೊಯ್ಯುವಾಗ...

ಚಾಮರಾಜನಗರ: ಕೋರ್ಟ್ ಗೆ ಕರೆದೊಯ್ಯುವಾಗ ತಪ್ಪಿಸಿಕೊಂಡಿದ್ದ ಕೈದಿಯನ್ನು ಬಂಧಿಸಿದ ಪೊಲೀಸರು

ರೈಲಿನಲ್ಲಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಬಲೆಗೆ ಬಿದ್ದ ಆರೋಪಿ

ವಾರ್ತಾಭಾರತಿವಾರ್ತಾಭಾರತಿ5 Aug 2023 8:41 PM IST
share
ಚಾಮರಾಜನಗರ: ಕೋರ್ಟ್ ಗೆ ಕರೆದೊಯ್ಯುವಾಗ ತಪ್ಪಿಸಿಕೊಂಡಿದ್ದ ಕೈದಿಯನ್ನು ಬಂಧಿಸಿದ ಪೊಲೀಸರು

ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೆ ಪೊಲೀಸರಿಗೆ ಬಲೆಗೆ ಬಿದ್ದಿದ್ದಾನೆ.

ಘಟನೆ ವಿವರ: ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್​​ ​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಕರೆದೊಯ್ಯುವಾಗ ಹಾಸನೂರಿನ ಹೋಟೆಲ್​ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ ಎನ್ನಲಾಗಿದೆ.

ರೈಲಿನಲ್ಲಿ ಬಲೆಗೆ ಬಿದ್ದ ಕೈದಿ

ಕೈಗೆ ಹಾಕಲಾಗಿದ್ದ ಬೇಡಿಯನ್ನು ಕಲ್ಲಿನಿಂದ ಜಜ್ಜಿಕೊಂಡು ಬೇಡಿ ಕಳಚಿಕೊಂಡು, ಹಾಕಿದ್ದ ಬಿಳಿ ಬಟ್ಟೆಯನ್ನು ಕಳಚಿ ಚಾಮರಾಜನಗರಕ್ಕೆ ಬಂದಿದ್ದಾನೆ ಎನ್ನಲಾಗಿದೆ.

ಚಾಮರಾಜನಗರದಿಂದ ನಂಜನಗೂಡಿಗೆ ನಿನ್ನೆ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ, ಇಂದು ನಂಜನಗೂಡಿನಿಂದ ವಾಪಸ್ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್ ಕದಿಯಲು ಯತ್ನಿಸಿದಾಗ ಅಲ್ಲೇ ಇದ್ದ ಸಹ ಪ್ರಯಾಣಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ನಾಪತ್ತೆಯಾಗಿದ್ದ ಕೈದಿಯ ಪ್ರಕರಣ ಸುಖಾಂತ್ಯಗೊಂಡಿದ್ದು, ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಸುರೇಶ್​ನ ಆರೋಗ್ಯ ತಪಾಸಣೆಗೊಳಿಸಿ ಸತ್ಯಮಂಗಲಂ ನ್ಯಾಯಾಲಯ ವಶಕ್ಕೆ ಕೊಡಲು ತೆರಳಿದ್ದಾರೆ.

ಇಬ್ಬರು ಪೊಲೀಸರಿಗೆ ಅಮಾನತು ಶಿಕ್ಷೆ: ವಿಚಾರಣಾ ಕೈದಿ ತಪ್ಪಿಸಿಕೊಂಡಿದ್ದ ಹಿನ್ನೆಲೆ ಮೀಸಲು ಪಡೆಯ ವೀರಭದ್ರ ಹಾಗೂ ಶಿವಾಜಿ ಎಂಬವರನ್ನು ಅಮಾನತುಗೊಳಿಸಿ ಚಾಮರಾಜನಗರ ಎಸ್ಪಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಇಬ್ಬರ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಸೂಚಿಸಿದ್ದಾರೆ.

ಆರೋಪಿತನ ವಿರುದ್ಧ ದಾಖಲಾಗಿರುವ ಪ್ರಕರಣಗಳು: ಬಂಧಿತ ಆರೋಪಿ ದೇವಾಲಯ ಹುಂಡಿ ಕಳವು, ದರೋಡೆ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X