ಮುಂದಿನ 24 ಗಂಟೆ ಕರಾವಳಿ ವ್ಯಾಪ್ತಿಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.15: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಸ್ತುತ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಒಣ ಹವೆ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ 30 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಮಳೆ: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಆರಂಭವಾದ ತುಂತುರು ಮಳೆ ರಾತ್ರಿ ಪೂರ್ತಿ ಮುಂದುವರೆದಿತ್ತು. ಅಂತೆಯೇ ರವಿವಾರ ಬೆಳಗ್ಗೆಯೂ ಕೆಲವೆಡೆ ಹನಿ ಮಳೆಯಾಗಿದೆ. ಮುಂದಿನ ಎರಡು ದಿನ ಮೋಡ ಮುಚ್ಚಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story