Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ...

ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ಪರಿಸ್ಥಿತಿ ಕುರಿತು ಚರ್ಚೆ

ವಾರ್ತಾಭಾರತಿವಾರ್ತಾಭಾರತಿ19 Dec 2023 12:53 PM IST
share
ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿ: ರಾಜ್ಯದಲ್ಲಿ ಕಾಡುತ್ತಿರುವ ಭೀಕರ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಪ್ರಧಾನಿ ಮೋದಿಯವರನ್ನು ಸಿಎಂ ಸಿದ್ದರಾಮಯ್ಯ ಹೊಸದಿಲ್ಲಿಯ ಸಂಸತ್‌ ಭವನದಲ್ಲಿ ಇಂದು ಭೇಟಿಯಾಗಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವರಿಕೆ ಮಾಡಿದರು.

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ.

ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X