Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ20 Aug 2023 7:09 PM IST
share
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು, ಆ. 20: ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ರವಿವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಸೋಮಶೇಖರ್, ‘ಯಶವಂತಪುರ ಕ್ಷೇತ್ರದ ಕೆಂಗೇರಿ ಹೋಬಳಿಯಲ್ಲಿ ಸಣ್ಣ ಹೆರಿಗೆ ಆಸ್ಪತ್ರೆ ಇದ್ದು ಜನಸಂಖ್ಯೆಗೆ ಅನುಗುಣವಾಗಿ ನೂತನವಾಗಿ ಹೆರಿಗೆ ಆಸ್ಪತ್ರೆ ನಿರ್ಮಿಸಲು ಸರ್.ಎಂ.ವಿಶ್ವೇಶ್ವರಯ್ಯ 2ನೆ ಬ್ಲಾಕ್ ಬಡಾವಣೆಯಲ್ಲಿ ಬಿಡಿಎ ವತಿಯಿಂದ 3432 ಚ.ಮೀ.ನಷ್ಟು ಸಿಎ ನಿವೇಶನ ಮಂಜೂರಾಗಿದೆ. ಆದರೆ, ಹೆರಿಗೆ ಆಸ್ಪತ್ರೆ ನಿರ್ಮಿಸಲು ಬಿಬಿಎಂಪಿ ಮುಂದಾಗಿಲ್ಲ’ ಎಂದು ಮನವಿ ಸಲ್ಲಿಸಿದ್ದಾರೆ.

‘ಹೆರಿಗೆ ಆಸ್ಪತ್ರೆ ಇಲ್ಲದಿರುವುದರಿಂದ ಹೆಣ್ಣುಮಕ್ಕಳು ನಗರದ ಕೇಂದ್ರ ಭಾಗದಲ್ಲಿರುವ ವಾಣಿವಿಲಾಸ ಆಸ್ಪತ್ರೆಗೆ ತೆರಳುವಂತಾಗಿದೆ. ವಾಣಿವಿಲಾಸ ಆಸ್ಪತ್ರೆ ದೂರವಿರುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ 1ಲಕ್ಷ ರೂ. ವರಗೆ ಬಿಲ್ ಪಾವತಿಸಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಕೆಂಗೇರಿ ಭಾಗದಲ್ಲಿ ತುರ್ತಾಗಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಬಿಬಿಎಂಪಿಗೆ ಆದೇಶ ನೀಡಬೇಕು’ ಎಂದು ಸೋಮಶೇಖರ್ ಕೋರಿದ್ದಾರೆ.

‘ಕೆಂಗೇರಿ ಉಪನಗರದಲ್ಲಿರುವ ಎಲ್‍ಸಿ 10ರಲ್ಲಿ ಅತಿಹೆಚ್ಚು ಸಂಚಾರ ದಟ್ಟಣೆ ಆಗುತ್ತಿರುವುದರಿಂದ ಓವರ್ ಬ್ರಿಡ್ಜ್ ನಿರ್ಮಿಸುವಂತೆ ಮೈಲಸಂದ್ರ ಮತ್ತು ಕೆಂಗೇರಿ ಉಪನಗರದ ನಿವಾಸಿಗಳ ಒತ್ತಾಯ. ಮೇಲ್ಸೇತುವೆ ನಿರ್ಮಾಣದ ಕುರಿತಂತೆ ಸಮೀಕ್ಷೆ ನಡೆಸಿ ವರದಿ ತಯಾರಿಸಿದ್ದು ಅಗತ್ಯ ಕ್ರಮಕೈಗೊಳ್ಳುವಂತೆಯೂ ಮುಖ್ಯಮಂತ್ರಿಗೆ ಎಸ್.ಟಿ.ಸೋಮಶೇಖರ್ ಆಗ್ರಹಿಸಿದ್ದಾರೆ.

‘ಇದು ಯಾವುದೇ ಕಾರಣಕ್ಕೂ ರಾಜಕೀಯ ಭೇಟಿಯಲ್ಲ, ಕೇವಲ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸೀಮಿತವಾಗಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ. ಇದರ ಹಿಂದೆ ಯಾವುದೇ ಅನ್ಯ ಉದ್ದೇಶವಿಲ್ಲ’

-ಎಸ್.ಟಿ.ಸೋಮಶೇಖರ್ ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X