ಚಿಕ್ಕಬಳ್ಳಾಪುರ ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಚಿಕ್ಕಬಳ್ಳಾಪುರ: ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದುʼ ಎಂದು ಪ್ರಕಟಿಸಿದ್ದಾರೆ.
ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರಲ್ಲಿ ಬಹುತೇಕರು ಆಂಧ್ರಪ್ರದೇಶದವರಾಗಿದ್ದಾರೆ ಎಂದು ಹೇಳಲಾಗಿದೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. - ಮುಖ್ಯಮಂತ್ರಿ @siddaramaiah #Chikballapura #Accident pic.twitter.com/GLLPlUAQiu
— CM of Karnataka (@CMofKarnataka) October 26, 2023