ಸರಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಸರಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸರಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರಕಾರ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು. 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿಂದ ಸರಕಾರಕ್ಕೆ 20 ಸಾವಿರ ಕೋಟಿ ರೂ.ಹೆಚ್ಚಿನ ಹೊರೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮoತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story