2025ಕ್ಕೆ ಅದ್ದೂರಿ ಸಂಗೊಳ್ಳಿ ರಾಯಣ್ಣ ಕಾರ್ಯಕ್ರಮ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಮುಂದಿನ ವರ್ಷದಿಂದ ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನ ಆ.15ರಂದು ಸಂಗೊಳ್ಳಿ ರಾಯಣ್ಣ ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣ ಬದುಕು ನಮಗೆಲ್ಲರಿಗೂ ಸ್ಪೂರ್ತಿ ಎಂದು ನುಡಿದರು.
ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಪ್ರಮುಖರಿದ್ದರು.
Next Story