ವರ್ಗಾವಣೆಗೆ ರಾಜಕೀಯ ಪ್ರಭಾವ ಬೀರುವ ನೌಕರರ ಮೇಲೆ ಶಿಸ್ತುಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು : ಸರಕಾರಿ ನೌಕರರು ವರ್ಗಾವಣೆ ಸೇರಿ ಸೇವಾ ವಿಷಯಗಳ ಬಗ್ಗೆ ರಾಜಕೀಯ ಪ್ರಭಾವವನ್ನು ಬೀರುತ್ತಿದ್ದು, ಇಂತಹ ಸಿಬ್ಬಂದಿ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಸರಕಾರಿ ನೌಕರರು ಸರಕಾರಕ್ಕೆ ಮನವಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಸುವಂತೆ ಮತ್ತು ಇಲಾಖಾ ಸಚಿವರಿಗೆ ನೇರವಾಗಿ ಸಲ್ಲಿಸದಿರುವಂತೆ ಸರಕಾರ ಆದೇಶ ಹೊರಡಿಸಿದೆ. ಆದರೂ, ಕೆಲವು ನೌಕರರು ಇದನ್ನು ಪಾಲಿಸದೆ ಮುಖ್ಯಮಂತ್ರಿ, ಸಚಿವ, ಶಾಸಕರಿಗೆ ನೇರವಾಗಿ ಮನವಿಗಳನ್ನು ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನೌಕರರಿಗೆ ಸರಕಾರಿ ಆದೇಶಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಅಲ್ಲದೆ ವರ್ಗಾವಣೆ ಸೇರಿ ಸೇವಾ ವಿಷಯಗಳ ಬಗ್ಗೆ ಸರಕಾರಿ ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಅವರು ಹೇಳಿದ್ದಾರೆ.
Next Story