'ಅನ್ನ ಸುವಿಧಾ' ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ
80 ವರ್ಷ ದಾಟಿದ ಹಿರಿಯ ನಾಗರಿಕರ ಮನೆಬಾಗಿಲಿಗೆ ಆಹಾರ ಧಾನ್ಯ ವಿತರಣೆ
ಬೆಂಗಳೂರು: ಎಂಬತ್ತು ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ‘ಅನ್ನ-ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಆಹಾರಧಾನ್ಯ ತಲುಪಿಸುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮಸರಕಾರದ ಹಿಂದಿನ ಅವಧಿಯಲ್ಲಿಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯಯೋಜನೆ ಜಾರಿಗೆತರಲಾಗಿತ್ತು.ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ 5ಕೆ.ಜಿ. ಆಹಾರಧಾನ್ಯ ನೀಡಲುತೀರ್ಮಾನಿಸಲಾಗಿದೆ.
ಆದರೆ ಕೇಂದ್ರ ಸರಕಾರದ ಅಸಹಕಾರಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ.ನಂತೆ ಪ್ರತಿ ಮಾಹೆ 170 ರೂ. ನೇರ ನಗದು ವರ್ಗಾವಣೆ ಮಾಡುವ ಮೂಲಕ ನಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ. ಜನವರಿ 2024ರ ಅಂತ್ಯದವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿರೂ.ವರ್ಗಾವಣೆ ಮಾಡಲಾಗಿದೆಎಂದರು.
Next Story