ನಾಳೆ (ಸೆ.13) ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ, ಸರ್ವ ಪಕ್ಷದ ನಾಯಕರಿಗೂ ಆಹ್ವಾನ
ಬೆಂಗಳೂರು: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ನಾಳೆ (ಬುಧವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾವಹಿಸಲಿದ್ದಾರೆ.
Next Story