ಲಾಲ್ಬಾಗ್ನಲ್ಲಿ 214ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆ.4: ಬೆಂಗಳೂರಿನ ಲಾಲ್ಬಾಗ್ನಲ್ಲಿ 214ನೇ ಫಲಪುಷ್ಪ ಪ್ರದರ್ಶವನ್ನು ಶುಕ್ರವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
2.50 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲವರ್ ಶೋ ಆಯೋಜನೆ ಮಾಡಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದರು. ಜತೆಗೆ ಸಿಎಂರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕ ಬಿಡುಗಡೆ ಮಾಡಿದರು.
ಸಮವಸ್ತ್ರ ಸಹಿತ ಶಾಲಾ ಮಕ್ಕಳಿಗೆ ಉಚಿತ
ಪ್ರದರ್ಶನಕ್ಕೆ ಎಲ್ಲಾ ನಾಲ್ಕು ದ್ವಾರಗಳಲ್ಲಿ ಸಾರ್ವಜನಿಕರಿಗೆ ಪ್ರವೇಶವಿರಲಿದ್ದು, ವಾರದ ದಿನಗಳಲ್ಲಿ 70 ರೂ. ಮತ್ತು ರವಿವಾರ ಮತ್ತು ಸರಕಾರಿ ರಜಾ ದಿನಗಳಲ್ಲಿ 80 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. 12 ವರ್ಷದ ಕೆಳಗಿನ ಮಕ್ಕಳಿಗೆ 30 ರೂ. ಪ್ರವೇಶ ಶುಲ್ಕವಿರಲಿದೆ. ಶಾಲಾ ಸಮವಸ್ತ್ರ ಮತ್ತು ಗುರುತಿನ ಚೀಟಿ ಧರಿಸಿ ಬರುವ 1ರಿಂದ 10ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರದರ್ಶನದ ಪೂರ್ಣ ಅವಧಿಯಲ್ಲಿ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.
Next Story