ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
Photo: facebook
ಬೆಳಗಾವಿ: ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ನಗರದ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದಿರುವ ಶಾಸಕಾಂಗ ಸಭೆಯಲ್ಲಿ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆದಿದ್ದು, ಲೋಕಸಭೆ ಚುನಾವಣೆಗಾಗಿ ಗ್ಯಾರಂಟಿಗಳ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡಬೇಕು ಎಂದು ಶಾಸಕರು, ಸಚಿವರಿಗೆ ಸಿಎಂ ಸಲಹೆ ನೀಡಿದರು.
ಬೂತ್ ಮತ್ತು ಬ್ಲಾಕ್ ಮಟ್ಟದಲ್ಲಿ ಹೆಚ್ಚೆಚ್ಚು ಕೆಲಸ ಮಾಡುವ ಮೂಲಕ ಪಕ್ಷವನ್ನು ಬಲಗೊಳಿಸಬೇಕು. ಆಯಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ತಂದುಕೊಡುವಂತೆ ಪ್ರಯತ್ನ ನಡೆಸಬೇಕು. ಆದಷ್ಟು ಬೇಗ ಸಂಭಾವ್ಯ ಅಭ್ಯರ್ಥಿಗಳ ವರದಿ ಸಿದ್ದಪಡಿಸಿ ಕೆಪಿಸಿಸಿಗೆ ರವಾನಿಸುವಂತೆ ಸಿಎಂ ಸೂಚನೆ ನೀಡಿದರು.
ಗ್ಯಾರಂಟಿಗಳ ಬಗ್ಗೆ ಪಂಚಾಯತಿ ಮಟ್ಟದಲ್ಲಿ ಸಮಾವೇಶ ಮಾಡಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡುವ ಮೂಲಕ ಜನರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ತಿಳಿಸಿದರು.
25 ಕೋಟಿ ಅನುದಾನ ನೀಡುವುದಾಗಿ ಸಿಎಂ ಘೋಷಣೆಗೆ ಮಾಡಿದಕ್ಕಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿದರು.