ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದ ಸಿಎಂ ಸಿದ್ಧರಾಮಯ್ಯ
PC: X.com
ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾದರು.
ಸಂಸತ್ತಿನ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ರಾಹುಲ್ ಗಾಂಧಿ, ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.
ವಯನಾಡ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರನ್ನು ಸಿದ್ದರಾಮಯ್ಯ ಅವರೂ ಅಭಿನಂದಿಸಿದರು.
ವಯನಾಡ್ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿ, ಸಂಸತ್ತು ಪ್ರವೇಶಿಸಿರುವ ಶ್ರೀಮತಿ @priyankagandhi ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ, ಭರ್ಜರಿ ಗೆಲುವಿಗೆ ಅಭಿನಂದಿಸಿದೆ.
— Siddaramaiah (@siddaramaiah) November 29, 2024
ಸಂಸತ್ತಿನ ಒಳಗೆ ಮತ್ತು ಹೊರಗೆ ನಮ್ಮ ನಾಯಕರಾದ @RahulGandhi ಅವರ ಜನಪರವಾದ ಧ್ವನಿಗೆ ಈ ಗೆಲುವಿನಿಂದ ಬಲ ಬಂದಿದೆ. pic.twitter.com/uMejtfnDXp