ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನದಲ್ಲಿ ಇಂದು (ಸೋಮವಾರ) ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಅನಾರೋಗ್ಯ ಹಿನ್ನೆಲೆ ರಾಜ್ಯಪಾಲರು ರವಿವಾರ ರಾತ್ರಿ ಸುಮಾರು 10 ಗಂಟೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಪಡೆದುಕೊಂಡು ತಡ ರಾತ್ರಿ ವೇಳೆ ರಾಜಭವನಕ್ಕೆ ಹಿಂದಿರುಗಿದ್ದಾರೆಂದು ತಿಳಿದು ಬಂದಿದೆ.
Next Story