ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ) 2024ರ ಫೆಬ್ರವರಿ 3 ಮತ್ತು 4ರಂದು ದಾವಣಗೆರೆಯಲ್ಲಿ ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬಿಡುಗಡೆ ಮಾಡಿದರು.
ಸಮ್ಮೇಳನದ ಉದ್ಘಾಟನೆ ಫೆ.3ರ ಬೆಳಗ್ಗೆ ನಡೆಯಲಿದ್ದು, ಅದರ ಉದ್ಘಾಟನೆಯನ್ನು ತಾವು ನೆರವೇರಿಸಿಕೊಡಬೇಕೆಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಹ್ವಾನಿಸಿದರು. ತಾವು ಸಮ್ಮೇಳನಕ್ಕೆ ಬರುವುದಾಗಿ ಸಮ್ಮತಿ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಇದೇ ವೇಳೆ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದರು.
ಪತ್ರಿಕಾ ಭವನಕ್ಕೆ ಡಿ.22ರಂದು ಶಂಕುಸ್ಥಾಪನೆ: ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ.22ರಂದು ಶಂಕುಸ್ಥಾಪನಾ ಕಾರ್ಯಕ್ರಮಕ್ಕೂ ಸಿಎಂ ಆಹ್ವಾನಿಸಲಾಯಿತು. 2ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಶಿವಾನಂದ ತಗಡೂರು ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಉಪಸ್ಥಿತರಿದ್ದರು.