ಲೋಕಾಯುಕ್ತ ಪೊಲೀಸರಿಂದ ಸಮನ್ಸ್: ವಿಚಾರಣೆಗೆ ಹಾಜರಾಗುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಕ್ರಮವಾಗಿ 14 ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ತಾನು ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾವೇರಿಯ ಹುರಿಳಿಕುಪ್ಪಿ ಗ್ರಾಮದಲ್ಲಿ ಪ್ರಚಾರದ ಸಭೆ ಬಳಿಕ ಸ್ಪಷ್ಟನೆ ನೀಡಿರುವ ಸಿಎಂ, ನವೆಂಬರ್ 6 ರಂದು ಲೋಕಾಯುಕ್ತದ ಎದುರು ಹಾಜರಾಗುವುದಾಗಿ ತಿಳಿಸಿದ್ದಾರೆ.
ಮುಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನ.6 ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದರು.
ನ.6 ಬುಧವಾರ ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಬರುವಂತೆ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
Next Story