ಫೆ.16ರ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡಲಿಸಲಿರುವ ಸಿಎಂ ಸಿದ್ದರಾಮಯ್ಯ: ಸ್ಪೀಕರ್ ಯು.ಟಿ.ಖಾದರ್
ಬೆಂಗಳೂರು: ಪ್ರಸ್ತುತ ವಾರ್ಷಿಕ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.16ರ ಬೆಳಗ್ಗೆ 10.15ಕ್ಕೆ ಮಂಡಿಸಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಕಟಿಸಿದ್ದಾರೆ.
ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪ್ರಕಟಿಸಿದ ಅವರು, ಫೆ.15ರಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿ ಉತ್ತರಿದ್ದು, ಫೆ.16ರ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಫೆ.19ರಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ ಎಂದು ಹೇಳಿದರು.
ವಿಧಾನಸೌಧದ ಆವರಣದಲ್ಲಿ ಇಂದಿನಿಂದ ಬಹುನಿರೀಕ್ಷಿತ 5ಜಿ ಸೇವೆ ಆರಂಭವಾಗಿದೆ. ಮೊಬೈಲ್ ಫೋನ್ ನೆಟ್‍ವರ್ಕ್ ಸಮಸ್ಯೆ ಕುರಿತಂತೆ ಸಾಕಷ್ಟು ದೂರುಗಳು ಬರುತ್ತಿದ್ದವು. ಹಾಗಾಗಿ 5ಜಿ ತರಂಗಾಂತರ ಸೇವೆಯನ್ನು ಆರಂಭಿಸಲಾಗಿದ್ದು, ಇದರಿಂದ ನೆಟ್‍ವರ್ಕ್ ಕಿರಿಕಿರಿಗೆ ಕಡಿವಾಣ ಬೀಳಲಿದೆ ಎಂದು ಖಾದರ್ ವಿಶ್ವಾಸ ವ್ಯಕ್ತಪಡಿಸಿದರು.
Next Story