ಇಂದು ಅತಿವೃಷ್ಟಿ ಬಾಧಿತ ಜಿಲ್ಲೆಗಳ ಉಸ್ತುವಾರಿ ಸಚಿವರು, ಡಿಸಿ ಜೊತೆ ಸಿಎಂ ವೀಡಿಯೊ ಸಂವಾದ
ಬೆಂಗಳೂರು, ಜು.31: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಜು.31) ಸಂಜೆ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.
ಅತಿವೃಷ್ಟಿ, ಮಳೆಹಾನಿ, ಪ್ರವಾಹ, ಗುಡ್ಡ ಕುಸಿತದ ಬಗ್ಗೆ ಸಂಬಂಧಪಟ್ಟ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಇಂದು ಸಂಜೆ 6 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ವೀಡಿಯೊ ಸಂವಾದದ ಮೂಲಕ ಮಾಹಿತಿ ಪಡೆಯಲಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.
Next Story