Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆಗೆ...

ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆಗೆ ಖಂಡನೆ : ಮೂರು ಜಿಲ್ಲೆಗಳ ಬಂದ್ ಯಶಸ್ವಿ

ಹುಬ್ಬಳ್ಳಿ-ಧಾರವಾಡ, ವಿಜಯನಗರ, ಬೀದರ್ ಬಂದ್‌ಗೆ ಕರೆ ನೀಡಿದ್ದ ದಲಿತ ಪರ ಸಂಘಟನೆಗಳು

ವಾರ್ತಾಭಾರತಿವಾರ್ತಾಭಾರತಿ9 Jan 2025 8:38 PM IST
share
ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆಗೆ ಖಂಡನೆ : ಮೂರು ಜಿಲ್ಲೆಗಳ ಬಂದ್ ಯಶಸ್ವಿ

ಬೆಂಗಳೂರು : ‘ಡಾ.ಬಿ.ಆರ್.ಅಂಬೇಡ್ಕರ್ ಎನ್ನುವುದು ಕೆಲವರಿಗೆ ಫ್ಯಾಶನ್ ಆಗಿದ್ದು, ಅಂಬೇಡ್ಕರ್ ಬದಲು ದೇವರ ಹೆಸರು ಹೇಳಿದರೆ ಸ್ವರ್ಗ ಸಿಗುತ್ತಿತ್ತು’ ಎಂದು ವಿವಾದಿತ ಮಾತುಗಳನ್ನಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಿ, ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ, ವಿಜಯನಗರ ಹಾಗೂ ಬೀದರ್ ಜಿಲ್ಲೆಗಳ ಬಂದ್ ಭಾಗಶಃ ಯಶಸ್ವಿ ಆಗಿದೆ.

ಗುರುವಾರ ಮುಂಜಾನೆ ಹುಬ್ಬಳ್ಳಿ-ಧಾರವಾಡ ಬಂದ್ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಅಂಗಡಿ, ಹೋಟೆಲ್‍ಗಳು ಬಂದ್ ಆಗಿದ್ದವು. ಔಷಧ ಅಂಗಡಿಗಳು ಮಾತ್ರ ತೆರದಿದ್ದು, ಹಾಲಿನ ವಾಹನ, ಆಂಬುಲೆನ್ಸ್ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ಪ್ರತಿಭಟನಕಾರರು ವಾಹನಗಳನ್ನು ಅಡ್ಡಗಟ್ಟುತ್ತಿದ್ದು, ಯಾವುದೇ ಬಸ್‌ಗಳು ಸಂಚರಿಸಲಿಲ್ಲ. ಪ್ರಮುಖವಾಗಿ ಚನ್ನಮ್ಮ ವೃತ್ತದಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದರೆ, ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಮಾಹಿತಿ ಇಲ್ಲದೆ, ಹೊರಬಂದಿದ್ದ ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದಕ್ಕೆ ಪರದಾಡುವಂತಾಗಿದೆ.

ಇನ್ನೊಂದೆಡೆ, ಧಾರವಾಡದ ಜುಬಿಲಿ ವೃತ್ತದಲ್ಲಿ ಜಮಾಯಿಸಿದ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಜೈ ಭೀಮ್ ಘೋಷಣೆ ಕೂಗಿದರು. ಹಳೆ ಹುಬ್ಬಳ್ಳಿಯ ದುರ್ಗದಬೈಲ್ ವೃತ್ತದಲ್ಲಿ ,ನ್ಯೂ ಇಂಗ್ಲಿಷ್‌ ಶಾಲೆ, ಇಂಡಿ ಪಂಪ್, ಬಂಕಾಪುರ ಚೌಕ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅದೇ ರೀತಿ, ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಕರೆ ನೀಡಿರುವ ವಿಜಯನಗರ ಜಿಲ್ಲಾ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ, ಬೀದರ್‌ ನಲ್ಲೂ ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟಿತು.

ಹೊಸಪೇಟೆಯಲ್ಲಿ ಬಂದ್ ಬಹುತೇಕ ಯಶಸ್ವಿಯಾದರೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿಗಳಲ್ಲಿ ಭಾಗಶಃ ಯಶಸ್ವಿಯಾಯಿತು. ಆದರೆ ಹರಪನಹಳ್ಳಿ, ಹೂವಿನ ಹಡಗಲಿ ಮತ್ತು ಕೊಟ್ಟೂರು ತಾಲ್ಲೂಕುಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೀದರ್‌ನಲ್ಲೂ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು, ಹೋಟೆಲ್‍ಗಳು ಮುಚ್ಚಿದ್ದವು. ಬಸ್ ಸಂಚಾರ ಇರಲಿಲ್ಲ. ಆಟೊ ಸಂಚಾರ ಬೆಳಿಗ್ಗೆ 10 ಗಂಟೆಯ ಬಳಿಕ ತೀರಾ ವಿರಳವಾಯಿತು. ಟ್ಯಾಕ್ಸಿಗಳು ಸಹ ರಸ್ತೆಗೆ ಇಳಿಯಲಿಲ್ಲ. ತರಕಾರಿ ಮಾರುಕಟ್ಟೆಯಲ್ಲಿ ಶೇ.40ರಷ್ಟು ಅಂಗಡಿಗಳು ತೆರೆದಿದ್ದವು. ಆದರೆ ಕೊಳ್ಳುವ ಗ್ರಾಹಕರ ಸಂಖ್ಯೆ ತೀರಾ ಕಡಿಮೆ ಕಂಡುಬಂದಿತು.

ಸರಕಾರಿ ಕಚೇರಿಗಳು, ಬ್ಯಾಂಕ್‍ಗಳು ಬಾಗಿಲು ತೆರೆದಿದ್ದವು. ಆದರೆ ಸಾರ್ವಜನಿಕರ ಸಂಖ್ಯೆ ಕಡಿಮೆ ಕಂಡುಬಂದಿತು. ಇನ್ನೂ, ಜಿಲ್ಲೆಯ ಮಟ್ಟಿಗೆ ಹೊಸಪೇಟೆಯಲ್ಲೇ ಉತ್ತಮ ರೀತಿಯಲ್ಲಿ ಪ್ರತಿಭಟನೆ ಮೆರವಣಿಗೆ ಮತ್ತು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಸಭೆ ನಡೆಯಿತು. ಅದೇ ರೀತಿ, ಬೀದರ್ ನಲ್ಲೂ ಮೆರವಣಿಗೆ ಕಂಡಿತು.

ಹೊಸಪೇಟೆಯಲ್ಲಿ ಹಿರಿಯ ಲೇಖಕ, ಚಿಂತಕ ಡಾ.ರಹಮತ್ ತರೀಕೆರೆ, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಮೊದಲಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಆಯಾ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ, ಲೋಕಸಭಾ ಸ್ಪೀಕರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಅಮಿತ್ ಶಾ ಅವರನ್ನು ಈ ಕೂಡಲೇ ಗೃಹ ಸಚಿವ ಸ್ಥಾನದಿಂದ ಕೈಬಿಡಬೇಕೆಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X