ಫೆ.17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿ.ಕೆ ಶಿವಕುಮಾರ್
ಬೆಂಗಳೂರು: ಫೆ. 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಾಣಾಂತರದಿಂದ ಅದನ್ನು ಮುಂದೂಡಲಾಗಿತ್ತು. ಪ್ರಸ್ತುತ ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Next Story