ಆಶಾ ಕಾರ್ಯಕರ್ತೆಯರ ಕಿವಿ ಮೇಲೆ ಹೂವು ಇಟ್ಟ ಕಾಂಗ್ರೆಸ್ : ಬಿಜೆಪಿ ಟೀಕೆ
ಬೆಂಗಳೂರು : ‘ಚುನಾವಣೆಗೂ ಮುನ್ನ ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸದೆ ಆಶಾ ಕಾರ್ಯಕರ್ತೆಯರ ಕಿವಿ ಮೇಲೆ ಹೂ ಇಟ್ಟಿದೆ. ಮೈ ಕೊರೆಯುವ ಚಳಿಯಲ್ಲಿ ಆಶಾ ಕಾರ್ಯಕರ್ತೆಯರು ರಸ್ತೆ ಬದಿಯಲ್ಲಿಯೇ ಮಲಗಿ ವಚನ ಭ್ರಷ್ಟ ಸಿದ್ದರಾಮಯ್ಯ ಸರಕಾರದ ವಿರುದ್ಧ ದಿಟ್ಟ ಹೋರಾಟ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಹೇಳಿದೆ.
ಗುರುವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಒಬ್ಬ ಮಹಿಳೆಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅವರ ಬೇಡಿಕೆಯನ್ನು ಕೇಳಲು ಹೋಗದೆ ಇರುವುದು ನಿಜಕ್ಕೂ ನಾಚಿಕೆಗೇಡು’ ಎಂದು ಬಿಜೆಪಿ ಟೀಕಿಸಿದೆ.
Next Story