ಬಿಜೆಪಿಯ 66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ?: ವಿಪಕ್ಷ ನಾಯಕನ ಆಯ್ಕೆ ವಿಳಂಬಕ್ಕೆ ಕಾಂಗ್ರೆಸ್ ಕಿಡಿ
ಬೆಂಗಳೂರು: ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆದರೂ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವ ಕುರಿತು ಕಾಂಗ್ರೆಸ್ ಪ್ರತಿಪಕ್ಷ ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ.
ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 2 ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಿರುವುದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಗೆ ಕಾಂಗ್ರೆಸ್ ಕೇಳಿದ ಪ್ರಶ್ನೆಗಳು:
• ರಾಜ್ಯ ಬಿಜೆಪಿಯ ಬಗ್ಗೆ ಹೈಕಮಾಂಡಿನ ತಿರಸ್ಕಾರವೇ?
• 66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ?
• ಆಂತರಿಕ ಕಚ್ಚಾಟದಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಲಾಗದ ತೊಳಲಾಟವೇ?
• ಆ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ, ಇನ್ನೂ ನಿಗದಿಪಡಿಸಿದ ಮೊತ್ತಕ್ಕೆ ಬಿಡ್ಡಿಂಗ್ ಆಗಿಲ್ಲವೇ?
• ನಮ್ಮ ಸರ್ಕಾರವನ್ನು ವಿರೋಧಿಸಲು ಸಕಾರಣಗಳು ಸಿಗುವುದಿಲ್ಲ ಎಂಬ ನಿರಾಸೆಯೇ?
• ಸೋಲಿನ ಅಘಾತದಿಂದ ಇನ್ನೂ ಸುಧಾರಿಸಿಕೊಂಡಿಲ್ಲವೇ?
• ಶಾಸನ ಸಭೆಯ ಪಟ್ಟುಗಳು, ನೀತಿ ನಿಯಮಗಳು ತಿಳಿದಿರುವಂತ ನಾಯಕರ ಕೊರತೆಯೇ?
• ಸಂತೋಷ್ vs ಯಡಿಯೂರಪ್ಪನವರ ಆಂತರಿಕ ಯುದ್ಧದ ಪರಿಣಾಮವೇ?