Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ತನ್ನ...

ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Nov 2023 12:49 PM IST
share
ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.22: "ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

“ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಭೇದ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು.

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಸಚಿವರು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ”ಎಂದರು.

ನಿಗಮ ಮಂಡಳಿ: ನ.28ಕ್ಕೆ ಮತ್ತೊಂದು ಸುತ್ತಿನ ಸಭೆ:

ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿ ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದಿಲ್ಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ”ಎಂದರು.

ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, “ಗೃಹಸಚಿವರು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ನೀವು (ಮಾಧ್ಯಮಗಳು) ದೊಡ್ಡದಾಗಿ ಬಿಂಬಿಸುತ್ತೀರಿ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ನಿಮ್ಮ ಘನತೆ ಯಾಕೆ ಹಾಳು ಮಾಡಿಕೊಳ್ಳುತ್ತೀರಿ” ಎಂದು ಪ್ರತಿಕ್ರಿಯಿಸಿದರು.

ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, “ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ನಾವು ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಧಿಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೈದು ಸಚಿವರನ್ನು ನೇಮಕ ಮಾಡಲಾಗದೇ ಮುಖ್ಯಮಂತ್ರಿಯೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗಣ ಬಿದ್ದದ್ದು, ಮೊದಲು ಅದನ್ನು ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X