ಮುರುಘಾ ಶ್ರೀ ವಿರುದ್ಧ ಪಿತೂರಿ ಆರೋಪ; ಬಸವರಾಜನ್ ದಂಪತಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಸೌಭಾಗ್ಯ | ಬಸವರಾಜನ್
ಬೆಂಗಳೂರು, ನ.4: ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದಲ್ಲಿ ಮಾಜಿ ಶಾಸಕ ಹಾಗೂ ಮಠದ ಆಡಳಿತಾಧಿಕಾರಿಯೂ ಆಗಿದ್ದ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಬಸವರಾಜನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣ ರದ್ದುಪಡಿಸಿ ಆದೇಶಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠ ತೀರ್ಪು ಪ್ರಕಟಿಸಿತು.
ಪ್ರಕರಣ ಸಂಬಂಧ ಈ ಹಿಂದೆ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದೂರುದಾರ ಬಸವಪ್ರಭು ಸ್ವಾಮೀಜಿ ಅವರು ಅರ್ಜಿದಾರರ ವಿರುದ್ಧ ದಾಖಲಿಸಿರುವ ಈ ದೂರಿನಲ್ಲಿ ಯಾವುದೇ ಹುರುಳಿಲ್ಲ. ಪೊಕ್ಸೋ ಪ್ರಕರಣದ ಆರೋಪಗಳಿಂದ ಶಿವಮೂರ್ತಿ ಶರಣರಿಗೆ ರಕ್ಷಣೆ ಒದಗಿಸಲು ಅರ್ಜಿದಾರರ ವಿರುದ್ಧ ಈ ಪ್ರತಿ ದೂರು ದಾಖಲಿಸಲಾಗಿದೆ ಎಂದು ವಿವರಿಸಿದರು.
ಈ ವಾದವನ್ನು ಆಕ್ಷೇಪಿಸಿದ ಸರಕಾರಿ ವಕೀಲರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಪೆÇೀಕ್ಸೋ ಪ್ರಕರಣದಲ್ಲಿ ಅರ್ಜಿದಾರರು ಸಹ ಸಾಕ್ಷಿಗಳಾಗಿದ್ದಾರೆ. ಅವರ ವಿರುದ್ಧ ಪ್ರತಿ ದೂರು ದಾಖಲಿಸಿರುವಾಗ ಸಾಕ್ಷಿಗಳ ರಕ್ಷಣೆ ಹೇಗೆ ತಾನೆ ಸಾಧ್ಯ?. ಪೊಕ್ಸೋ ಪ್ರಕರಣದ ವಿಚಾರಣೆ ದಿಕ್ಕು ತಪ್ಪುವುದಿಲ್ಲವೇ? ಶರಣರ ವಿರುದ್ಧದ ಪೆÇೀಕ್ಸೋ ಪ್ರಕರಣ ಚಿತ್ರದುರ್ಗ ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ಹಂತ ತಲುಪಿದೆ. ಆ ವಿಚಾರಣೆ ಪೂರ್ಣಗೊಂಡರೆ, ಎಲ್ಲ ಸತ್ಯಾಂಶ ಹೊರಬರುತ್ತದೆಯಲ್ಲವೇ? ಎಂದು ಕೇಳಿ, ಅರ್ಜಿಯ ಹೆಚ್ಚಿನ ವಿಚಾರಣೆಯನ್ನು ಪೂರ್ಣಗೊಳಿಸಿತು.