ಝಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ : ಅಡ್ವೊಕೇಟ್ ಜನರಲ್ಗೆ ಟಿ.ಜೆ.ಅಬ್ರಹಾಂ ಪತ್ರ
ಬಿ.ಝಡ್. ಝಮೀರ್ ಅಹ್ಮದ್
ಬೆಂಗಳೂರು : ನ್ಯಾಯಾಂಗ ನಿಂದನೆ ಮಾಡಿರುವ ಆರೋಪದಡಿಯಲ್ಲಿ ವಸತಿ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಜರುಸಗಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಪತ್ರ ಬರೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ರಾಜಕೀಯ ತೀರ್ಪು ಎಂದು ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಝಮೀರ್ ಅಹ್ಮದ್ ಖಾನ್ ಸಾರ್ವಜನಿಕರ ದೃಷ್ಟಿಯಲ್ಲಿ ಹೈಕೋರ್ಟ್ ಅನ್ನು ನಕಾರಾತ್ಮಕವಾಗಿ ಬಿಂಬಿಸುವ ಯತ್ನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ದ ನ್ಯಾಯಾಂಗ ನಿಂದನೆ ಕಾಯ್ದೆ-1971ರ ಕಲಂ 15(1) (ಬಿ) ಅಡಿ ವಿಚಾರಣೆ ನಡೆಸಬೇಕು ಎಂದು ಅಬ್ರಹಾಂ ಪತ್ರದಲ್ಲಿ ವಿವರಿಸಿದ್ದಾರೆ.
Next Story