ಕರಾವಳಿ ಜಿಲ್ಲೆಗಳಲ್ಲಿ ಮುಂದುವರೆದ ಯೆಲ್ಲೋ ಅಲರ್ಟ್
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದ ಕೆಲ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಭಾಗದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಡುಪಿ ಜಿಲ್ಲೆಗೆ ಸೆ.4 ರಿಂದ ಸೆ.6ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Next Story