ಕರ್ನಾಟಕದಲ್ಲಿ ವಿವಾದಿತ ‘ಹಮಾರೆ ಬಾರಾಹ್’ ಸಿನಿಮಾ ನಿಷೇಧ
Photo : x/@ItsKhan_Saba
ಬೆಂಗಳೂರು : ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
“ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ರೀತಿಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ರಾಜ್ಯ ಸರಕಾರದ ಆದೇಶ ಉಲ್ಲಂಘನೆ ಕಂಡುಬಂದಲ್ಲಿ, ಕಾನೂನು ರೀತ್ಯಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
Next Story