LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯನ್ನು ಪ್ರಾರಂಭಿಸಲಿದ್ದಾರೆ. ಆ ಮೂಲಕ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.
ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಾರ್ಯದರ್ಶಿ ಪಿ.ಸಿ. ಜಾಫರ್ ಬಜೆಟ್ ಪ್ರತಿ ಇರುವ ಸೂಟ್ ಕೇಸ್ ಅನ್ನು ಸಿಎಂ ಗೆ ಹಸ್ತಾಂತರಿಸಿದರು. ಈ ವೇಳೆ ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ. ಅತೀಕ್ , ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಉಪಸ್ಥಿತರಿದ್ದರು.
ಕಳೆದ ಬಾರಿ ಸಿಎಂ 3.71 ಲಕ್ಷ ರೂ. ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ಗೆ ಏರಿಕೆಯಾಗಲಿದೆ ಎನ್ನಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎದು ಹೇಳಿದ್ದಾರೆ.
Live Updates
- 7 March 2025 12:19 PM IST
Sc St ವಸತಿ ನಿಲಯ ದಲ್ಲಿ ಅಭ್ಯಾಸ ಮಾಡ್ತಿರುವ ವಿದ್ಯಾರ್ಥಿಗಳ ವೆಚ್ಚವಾಗಿ 3500 ರೂ. ಪ್ರತಿ ತಿಂಗಳು ಕೊಡಲಾಗುವುದು
- 7 March 2025 12:18 PM IST
ಅಂಬೇಡ್ಕರ್ ಓದಿದ್ದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಕೊಲಂಬಿಯಾ ವಿವಿ ವ್ಯಾಸಂಗ ಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಫೆಲೋಶಿಪ್ ಯೋಜನೆ ಅಡಿ ಒಂದು ಕೋಟಿ ರೂ. ಅನುದಾನ