Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ...

ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ30 Dec 2024 5:20 PM IST
share
ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಬೆಂಗಳೂರು: ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಡಿ.19ರಂದು ಇಡೀ ರಾತ್ರಿ ಪೊಲೀಸರು ಅಮಾನವೀಯವಾಗಿ ವರ್ತನೆ ಮಾಡಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತು ಸದಸ್ಯ ಸಿ.ಟಿ. ರವಿ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಸೋಮವಾರ ನಗರದಲ್ಲಿ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯರನ್ನು ಒಳಗೊಂಡ ಸಿ.ಟಿ. ರವಿ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‍ರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದು, ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಎಸ್‍ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚನೆ ಮೇರೆಗೆ ಪೊಲೀಸರು ಸುಪಾರಿ ಕಿಲ್ಲರ್ ರೀತಿ ವರ್ತಿಸಿದ್ದಾರೆ. ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‍ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶ ಮಾಡಿ ಬಂಧಿಸಿದ್ದು ಅಕ್ರಮವಾಗಿದ್ದು, ನನ್ನ ಹಕ್ಕು ಚ್ಯುತಿ ಆಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ ಹಾಗೂ ಕಾನೂನು ವಿರೋಧಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನನ್ನು ಕಬ್ಬಿನ ಗದ್ದೆ, ಕ್ರಷರ್‌ಗೆ ಕರೆದುಕೊಂಡು ಹೋಗಿ ಎನ್‍ಕೌಂಟರ್ ಮಾಡಲು ಯತ್ನಿಸಿದ್ದರು. ಒಂದೋ ಹತ್ಯೆ ಮಾಡಬೇಕು, ಇಲ್ಲವೇ ಆತ್ಮಹತ್ಯೆಗೆ ಶರಣಾಗಬೇಕು ಎನ್ನುವಂತಹ ಕಾಟ ಕೊಟ್ಟಿದ್ದಾರೆ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X