ದಾವಣಗೆರೆ | ಗ್ರಾಮಸ್ಥರನ್ನು ಕಾಡಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆ
ದಾವಣಗೆರೆ, ಜು.19: ಚನ್ನಗಿರಿ ತಾಲೂಕಿನ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಬುಧವಾರ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಗರಗ ಗ್ರಾಮದ ಪಾಲಾಕ್ಷಪ್ಪ ಎಂಬ ರೈತರನ ತೋಟದ ಮನೆ ಬಳಿ ಬೋನಿ ಬಿದ್ದಿದೆ. ಈ ಹಿಂದೆ ಪರಿಸರದಲ್ಲಿ ಹಲವು ಸಲ ಚಿರತೆ ಕಾಣಿಸಿಕೊಂಡಿದ್ದು, ಕೆಲವು ಜಾನುವಾರಗಳ ಮೇಲೂ ದಾಳಿ ನಡೆಸಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಗೆ ಮುಂದಾಗಿತ್ತು.
ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿದೆ.
Next Story