ಬೆಂಗಳೂರಿನ ಅಭಿವೃದ್ಧಿಗೆ ಸಲಹೆ ಕೊಡಿ: ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ
ಬೆಂಗಳೂರು: 'ನಮ್ಮ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಸಾರ್ವಜನಿಕರು ಸಲಹೆ ನೀಡುವಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಆಸಕ್ತರು http://brandbengaluru.karnataka.gov.in ವೆಬ್ಸೈಟ್ಗೆ ಲಾಗಿನ್ ಆಗಿ ನಿಮ್ಮ ಸಲಹೆಗಳನ್ನು ನಮಗೆ ಕಳಿಸಬಹುದು. ಅಥವಾ 9480685700 ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡಬಹುದು'' ಎಂದು ತಿಳಿಸಿದ್ದಾರೆ.
''ಸಲಹೆಗಳನ್ನು ಕಳಿಸಲು ಜುಲೈ 20. ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗೆ 1533ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ''ಎಂದು ಮಾಹಿತಿ ನೀಡಿದ್ದಾರೆ.
Next Story