Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ತವ್ಯನಿರತ ಮಹಿಳಾ ಪಿಎಸ್‌ಐ ಗೆ ಜೀವ...

ಕರ್ತವ್ಯನಿರತ ಮಹಿಳಾ ಪಿಎಸ್‌ಐ ಗೆ ಜೀವ ಬೆದರಿಕೆ: ಮೂವರು ಬಂಧನ

ವಾರ್ತಾಭಾರತಿವಾರ್ತಾಭಾರತಿ4 Dec 2023 7:57 PM IST
share
ಕರ್ತವ್ಯನಿರತ ಮಹಿಳಾ ಪಿಎಸ್‌ಐ ಗೆ ಜೀವ ಬೆದರಿಕೆ: ಮೂವರು ಬಂಧನ

ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್‌ಐ ಜೊತೆ ಅನುಚಿತ ವರ್ತನೆ ತೋರಿದ್ದಲ್ಲದೆ, ನಿಂದಿಸಿ ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳನ್ನು ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಮುದ್ದಿನಪಾಳ್ಯ ಮುಖ್ಯ ರಸ್ತೆಯ ಅಶ್ವ ವೆಜ್ ಮತ್ತು ನಾನ್ ವೆಜ್ ಹೋಟೆಲ್ ಮಾಲಕ ಸಂಜೀವ್ ಗೌಡ, ಕ್ಯಾಶಿಯರ್ ಸಂದೀಪ್ ಕುಮಾರ್ ಹಾಗೂ ಹೇಮಂತ್ ಎಂಬುವರನ್ನು ಬಂಧಿಸಲಾಗಿದೆ.

ಡಿ.2ರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪಿಎಸ್‌ಐ ಪ್ರತಿಮಾ ತಡರಾತ್ರಿ ಮುದ್ದಿನಪಾಳ್ಯ ಮುಖ್ಯ ರಸ್ತೆಯ ಅಶ್ವ ವೆಜ್ ಮತ್ತು ನಾನ್ ವೆಜ್ ಹೋಟೆಲ್ ಬಳಿ ತೆರಳಿದ್ದರು. ಅವಧಿ ಮುಗಿದ ಬಳಿಕವೂ ಹೋಟೆಲ್ ತೆರೆದಿದ್ದರಿಂದ ಬಂದ್ ಮಾಡುವಂತೆ ಹೋಟೆಲ್ ಸಿಬ್ಬಂದಿಗೆ ಸೂಚಿಸಿದ್ದರು.

ಈ ವೇಳೆ ಹೋಟೆಲ್ ಮಾಲಕ ಸಂಜೀವ್ ಗೌಡ ‘ತನಗೆ ದಿನದ 24 ಗಂಟೆಯೂ ಹೋಟೆಲ್ ತೆರೆದಿರಲು ಅನುಮತಿಯಿದೆ' ಎಂದಿದ್ದಾನೆ. ಅನುಮತಿ ಪತ್ರ ತೋರಿಸಿ ಎಂದಾಗ, ‘ಆರ್.ಟಿ.ಐನಲ್ಲಿ ಅರ್ಜಿ ಹಾಕಿ ಪಡೆದುಕೋ' ಎನ್ನುತ್ತಾ ಏಕವಚನದಲ್ಲಿ ನಿಂದಿಸುತ್ತ, ಅಸಭ್ಯವಾಗಿ ಕೈ ಬೆರಳು ಪ್ರದರ್ಶಿಸಿದ್ದಾನೆ. ಅಲ್ಲದೇ, ‘ನೀವೇ ಲಂಚ ಕೇಳಲು ಬಂದಿದ್ದೀರಿ ಎಂದು ವಿಡಿಯೋ ವೈರಲ್ ಮಾಡುತ್ತೇನೆ, ನಿಮ್ಮ ಬಟ್ಟೆ ಬಿಚ್ಚಿಸಿ, ಜನ್ಮ ಜಾಲಾಡುತ್ತೇನೆ' ಎಂದು ಬಾಯಿಗೆ ಬಂದಂತೆ ಮಾತನಾಡುತ್ತ ಬೆದರಿಕೆ ಹಾಕಿದ್ದಾನೆ. ಆರೋಪಿಗೆ ಕ್ಯಾಶಿಯರ್ ಸಂದೀಪ್ ಕುಮಾರ್ ಹಾಗೂ ಹೇಮಂತ್ ಸಾಥ್ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಜ್ಞಾನಭಾರತಿ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಕರೆಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಪಿಎಸ್‌ಐ ಪ್ರತಿಮಾರಿಂದ ದೂರು ಪಡೆದು ಐಪಿಸಿ ಸೆಕ್ಷನ್ 341, 190, 353, 354 ಮತ್ತಿತರ ಕಾಯ್ದೆಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X